ಮಂಗಳೂರು: ಕೇರಳದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಬಿರುಸುಗೊಂಡಿದ್ದು ಗಡಿಜಿಲ್ಲೆ ಕಾಸರಗೋಡಿನಲ್ಲಿ ರಾಜ್ಯದ ಮುಖಂಡರು ಕೂಡಾ ಭರ್ಜರಿ ಕಸರತ್ತಿನಲ್ಲಿ ತೊಡಗಿದ್ದಾರೆ.
ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎ.ಕೆ.ಎಂ ಅಶ್ರಪ್ ಗೆಲುವಿಗಾಗಿ ಡಿ.ಕೆ.ಶಿವಕುಮಾರ್, ರಮಾನಾಥ ರೈ ಅಖಾಡಕ್ಕೆ ಧುಮುಕಿದ್ದಾರೆ. ಈ ನಾಯಕರು ಪ್ರಚಾರದ ಸಂದರ್ಭದಲ್ಲಿ ಮಸಿದಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಮನಸೆಳೆದರು.