ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣ ಪೂರ್ಣಗೊಂಡಿದ್ದು ಬಿಡುಗಡೆಗೆ ತಯಾರಿ ನಡೆದಿರುವ ಕುರಿತು ನಟ ದ್ರುವ ಸರ್ಜಾ ಮಾಹಿತಿ ಹಂಚಿಕೊಂಡಿದ್ದಾರೆ.
‘ಮಾರ್ಟಿನ್’ ಸಿನಿಮಾ ಸೆಟ್ಟೇರಿ ವರ್ಷಗಳೇ ಕಳೆದು ಹೋಗಿದ್ದು, ಸವಾಲುಗಳ ನಡುವೆ ಚಿತ್ರೀಕರಣ ಪೂರ್ಣಗೊಂಡಿದೆ. ಆದರೆ, ಈ ಸಿನಿಮಾ ವಿಚಾರದಲ್ಲಿ ನಿರ್ಮಾಪಕ ಉದಯ್ ಮೆಹ್ತ, ತಮಗೆ ಸಿಜಿಐ ಕಂಪೆನಿಯೊಂದು 2.5 ಕೋಟಿ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ನಡುವೆ ‘ಮಾರ್ಟಿನ್’ ಸಿನಿಮಾದ ಬಗ್ಗೆ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.
ಅಕ್ಟೋಬರ್ 11ರಂದು ತೆರೆಗೆ:
ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ರಂದು ಬಿಡುಗಡೆಗೆ ತಯಾರಿ ನಡೆದಿದೆ. ಆಗಸ್ಟ್ 5ರಂದು ಮುಂಬೈನಲ್ಲಿ ಅಂತಾರಾಷ್ಟ್ರೀಯ ಪ್ರೆಸ್ಮೀಟ್ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ದ್ರುವ ಸರ್ಜಾ ತಿಳಿಸಿದ್ದಾರೆ. ಕನ್ನಡ ಮಾತ್ರವಲ್ಲ ಅರೆಬಿಕ್, ಕೊರಿಯನ್, ಬೆಂಗಾಲಿ ಸೇರಿ 13 ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಸದ್ಯವೇ ಟ್ರೇಲರ್ ರಿಲೀಸ್ ಆಗಲಿದೆ ಎಂದು ದ್ರುವ ಸರ್ಜಾ ತಿಳಿಸಿದ್ದಾರೆ.