ಮಡಿಕೇರಿ: ರಾಜ್ಯದಲ್ಲಿ ಕೋವಿಡ್ ರೀತಿಯಲ್ಲಿ ಉಸಿರಾಟದ ಸಮಸ್ಯೆಯ ಪ್ರಕರಣಗಳು ವ್ಯಾಪಕವಾಗಿರುವುದರಿಂದ 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಅವರು ತಿಳಸಿದ್ದಾರೆ.
ಕುಶಾಲನಗರದ ಸಮುದಾಯ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು. ಉಸಿರಾಟದ ತೊಂದರೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಕಡ್ಡಾಯ ಗೊಳಿಸಲಾಗುವುದು ಎಂದ ಸಚಿವ ದಿನೇಶ್ ಗುಂಡೂರಾವ್, ಶೀತ, ಜ್ವರ ಮತ್ತು ಕೆಮ್ಮು ಇರುವವರು ಕೋವಿಡ್-19 ಪರೀಕ್ಷೆಗೆ ಒಳಗಾಗುವಂತೆ ಎಚ್ಚರಿಕೆ ನೀಡಲಾಗಿದೆ. ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ’ ಎಂದರು. ಆದರೂ ಈ ವಿಚಾರದಲ್ಲಿ ಆತಂಕ ಬೇಡ ಎಂದವರು ಹೇಳಿದರು.
I request the public not to panic about the new sub-variant of coronavirus in the state. However, I urge those above 60 years of age and those suffering from cold, cough, fever, or comorbidities like heart and kidney-related diseases to wear masks compulsorily.
As a… pic.twitter.com/55peHWUPBp
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 18, 2023
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಅಗತ್ಯ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದರು.




























































