ಬೆಂಗಳೂರು: ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಹಂಚಿಕೊಂಡಿದ್ದಾರೆ. ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಕುರಿತಂತೆ ರಾಜಕೀಯ ಪಕ್ಷಗಳ ನಾಯಕರ ನಡುವೆ ಜಟಾಪಟಿ ನಡೆದಿದಿದ್ದು ಈ ಸಂದರ್ಭದಲ್ಲೇ ಯತ್ನಾಳ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ತಾನು ಆರೋಪ ಮಾಡಿರುವ ಮೌಲ್ವಿ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಯತ್ನಾಳ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲ, ಓಲೈಕೆ ಮಾಡೋದು ನಿಲ್ಲಿಸಿ, ನಾನೇ ತನಿಖೆ ಮಾಡಲು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೀನಿ ಎಂದು ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರ ಗಮನಸೆಳೆದಿರುವ ಬಸನಗೌಡ ಪಾಟೀಲ್ ಯತ್ನಾಳ್, ನೀವೂ ತನಿಖೆಗೆ ಆದೇಶಿಸಿ, ಅಲ್ಲಿದ್ದ ನೂರಾರು ಮೌಲ್ವಿಗಳನ್ನು ಹೊರತು ಸಾಕ್ಷಿ ಇರುವ ಕಾರಣಕ್ಕಾಗಿಯೇ ಈ ವ್ಯಕ್ತಿಯ ವಿರುದ್ಧ ಆರೋಪ ಮಾಡಿರುವುದು. ಎಂದಿದ್ದಾರೆ.
I have written a letter to Union Home Minister Shri @AmitShah Ji to order @NIA_India enquiry into Tanveer Peeras Links with Terror organisations, his Transactions and his meetings with Terror Outfit Sympathisers. https://t.co/fJYWVrShgI pic.twitter.com/vqC8VtQ5ex
— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) December 6, 2023
ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಸಿದ್ದರಾಮಯ್ಯನವರು ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಗ್ಗೆ ಬೆಳಕು ಚೆಲ್ಲಿದ್ದರು. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಅವರು ಪೋಸ್ಟ್ ಮಾಡಿದ್ದರು.
ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಯತ್ನಾಳ್ ಅವರು ಬೊಟ್ಟು ಮಾಡಿದ್ದರು. ಜೊತೆಗೆ, ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದ್ದರು.
ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ.
ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ.
ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ… pic.twitter.com/XKFkvhkPXk
— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) December 6, 2023
































































