ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆತಂಕ ಹೆಚ್ಚಿದ್ದು ಸೂಕ್ತ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಸೂಚಿಸಿದೆ. ಇದೇ ವೇಳೆ, ಕೊರೋನಾ ಬಂದರೆ ರೋಗಿಗಳು ಹೋಂ ಐಸೊಲೇಷನ್ ನಲ್ಲಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.






















































