ಬೆಂಗಳೂರು: ಕೊರೋನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿನ ಬೆಳವಣಿಗೆ ಹಾಗೂ ಸರ್ಕಾರದ ಆದೇಶದ ಕಾರಣದಿಂದ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನು ಕೊನೆಗೊಳಿಸಿದ್ದಾರೆ. ಆದರೆ ಕೊರೋನಾ ಸೋಂಕು ತಗ್ಗಿದ ಬಳಿಕ ಮತ್ತೆ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಹೇಳಿದೆ.
ನಾಡಿನ ಹಿತಕ್ಕಾಗಿ, ಕುಡಿಯುವ ನೀರಿಗಾಗಿನ ನಮ್ಮ ಪಾದಯಾತ್ರೆಯನ್ನು ಬೆಂಬಲಿಸಿ ನಮ್ಮೊಂದಿಗೆ ಹೆಜ್ಜೆಹಾಕಿದ ಎಲ್ಲರಿಗೂ ಧನ್ಯವಾದಗಳು.
ನೀರಿಗಾಗಿನ ನಮ್ಮ ಹೋರಾಟವನ್ನು ತತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
ಕರೋನಾ ನಿಯಂತ್ರಣಕ್ಕೆ ಬಂದ ನಂತರ ಪಾದಯಾತ್ರೆ ಮುಂದುವರಿಯಲಿದೆ.#MekedatuPadayatre pic.twitter.com/G9F71Mg6Yk
— Karnataka Congress (@INCKarnataka) January 13, 2022