ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಕೈಗೊಂಡ ಕಾಂಗ್ರೆಸ್ ನಾಯಕರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮೂಲಕ ಮೊಣಚು ಪದಗಳಿಂದ ಕೈ ನಾಯಕರನ್ನು ತಿವಿದಿರುವ ಸುಧಾಕರ್, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದವರ ಬದ್ದತೆ ಬಗ್ಗೆ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಕರ್ನಾಟಕದ ಜನರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದ್ದರೂ ರಾಜ್ಯದಲ್ಲಿ ಜಾಣ ಕುರುಡುತನ ಪ್ರದರ್ಶಿಸುತ್ತಿರುವ ಕಾಂಗ್ರೆಸ್ ಪಕ್ಷ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕದ ಜನರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದ್ದರೂ ರಾಜ್ಯದಲ್ಲಿ ಜಾಣ ಕುರುಡುತನ ಪ್ರದರ್ಶಿಸುತ್ತಿರುವ ಕಾಂಗ್ರೆಸ್ ಪಕ್ಷ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ.
1/3 pic.twitter.com/VXjxVhaTmY
— Dr Sudhakar K (@mla_sudhakar) March 22, 2022
ಪಾದಯಾತ್ರೆಯ ಬೀದಿನಾಟಕ ಮಾಡಿ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ನಾಯಕರಿಗೆ ತಮ್ಮ ಮಿತ್ರ ಪಕ್ಷವಾದ ಡಿಎಂಕೆ ಬಳಿ ಮೇಕೆದಾಟು ಯೋಜನೆ ಜಾರಿಗೆ ಸಹಕರಿಸುವಂತೆ ಹೈಕಮಾಂಡ್ ಮೂಲಕ ಮನವೊಲಿಸುವ ಧೈರ್ಯವಿಲ್ಲವೇ? ಅಥವಾ ಕನ್ನಡಿಗರ ಪರವಾಗಿ ಧ್ವನಿ ಎತ್ತುವ ಮನಸ್ಸಿಲ್ಲವೇ? ಎಂದವರು ಪ್ರಶ್ನಿಸಿದ್ದಾರೆ.
ಪಾದಯಾತ್ರೆಯ ಬೀದಿನಾಟಕ ಮಾಡಿ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ನಾಯಕರಿಗೆ ತಮ್ಮ ಮಿತ್ರ ಪಕ್ಷವಾದ ಡಿಎಂಕೆ ಬಳಿ ಮೇಕೆದಾಟು ಯೋಜನೆ ಜಾರಿಗೆ ಸಹಕರಿಸುವಂತೆ ಹೈಕಮಾಂಡ್ ಮೂಲಕ ಮನವೊಲಿಸುವ ಧೈರ್ಯವಿಲ್ಲವೇ? ಅಥವಾ ಕನ್ನಡಿಗರ ಪರವಾಗಿ ಧ್ವನಿ ಎತ್ತುವ ಮನಸ್ಸಿಲ್ಲವೇ?
2/3 pic.twitter.com/3fWbW0Is8F
— Dr Sudhakar K (Modi ka Parivar) (@DrSudhakar_) March 22, 2022
ಅಧಿಕಾರದ ದುರಾಸೆಯಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನೆಪವೊಡ್ಡಿ ಮೈತ್ರಿ ಮಾಡಿಕೊಳ್ಳಲು ಹಪಹಪಿಸುವ ಪಕ್ಷಗಳು ಈಗ ಮೌನಕ್ಕೆ ಶರಣಾಗಿರುವುದು ದುರದೃಷ್ಟಕರ. ಕರ್ನಾಟಕದ ಹಕ್ಕನ್ನು ಕಸಿದುಕೊಳ್ಳಲು ಯತ್ನಿಸುತ್ತಿರುವ ತನ್ನ ಮಿತ್ರ ಪಕ್ಷ ಡಿಎಂಕೆ ವಿರುದ್ಧ ಕಾಂಗ್ರೆಸ್ ನಾಯಕರು ಚೆನ್ನೈನ ಮರೀನಾ ಬೀಚಿಗೆ ಪಾದಯಾತ್ರೆ 3.0 ಕೈಗೊಳ್ಳುವರೇ? ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ.
ಅಧಿಕಾರದ ದುರಾಸೆಯಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನೆಪವೊಡ್ಡಿ
ಮೈತ್ರಿ ಮಾಡಿಕೊಳ್ಳಲು ಹಪಹಪಿಸುವ ಪಕ್ಷಗಳು ಈಗ ಮೌನಕ್ಕೆ ಶರಣಾಗಿರುವುದು ದುರದೃಷ್ಟಕರ.ಕರ್ನಾಟಕದ ಹಕ್ಕನ್ನು ಕಸಿದುಕೊಳ್ಳಲು ಯತ್ನಿಸುತ್ತಿರುವ ತನ್ನ ಮಿತ್ರ ಪಕ್ಷ ಡಿಎಂಕೆ ವಿರುದ್ಧ ಕಾಂಗ್ರೆಸ್ ನಾಯಕರು ಚೆನ್ನೈನ ಮರೀನಾ ಬೀಚಿಗೆ ಪಾದಯಾತ್ರೆ 3.0 ಕೈಗೊಳ್ಳುವರೇ?
3/3 pic.twitter.com/9XPlAV6OfO
— Dr Sudhakar K (Modi ka Parivar) (@DrSudhakar_) March 22, 2022