ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಜಾಥಾ ನಡೆಸಿದರು.
ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಉಪಸ್ಥಿತಿಯಲ್ಲಿ ಈ ಜಾಥಾ ನಡೆಸಲಾಯಿತು.
ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿದ ನಾಯಕರು ‘ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮಹದಾಯಿ ಯೋಜನೆಯ ಅನುಮೋದನೆಗಾಗಿ” ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗೆ ಪ್ರಸ್ತಾವನೆ ಸಲ್ಲಿಸಿದರು.