ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಪ್ರತಿಷ್ಠೆಯ ಕದನಕ್ಕೆ ಸಾಕ್ಷಿಯಾಗಿದೆ. ಕೊರೋನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ನಿಯಮ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದರೂ ಕಾಂಗ್ರೆಸ್ ನಾಯಕರು ತಮ್ಮ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಕೈ ನಾಯಕರ ಈ ನಡೆ ಬಗ್ಗೆ ಆಡಳಿತ ಪಕ್ಷದ ನಾಯಕರು ಕಿಡಿಕಾರಿದ್ದಾರೆ.
ಈ ನಡುವೆ, ಪಾದಯಾತ್ರೆಗೂ ಮುನ್ನ ಕಾವೇರಿಗೆ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿಬಿದ್ದ ಘಟನೆ ನಡೆದಿತ್ತು. ಈ ಕುರಿತ ವೀಡಿಯೋವನ್ನು ಬಿಜೆಪಿ ವೈರಲ್ ಮಾಡಿದೆ. ‘ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಎಂದು ವ್ಯಂಗ್ಯವಾಗಿ ಬಿಜೆಪಿ ಟ್ವೀಟ್ ಮಾಡಿದೆ.
ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ!#ಸುಳ್ಳಿನಜಾತ್ರೆ pic.twitter.com/xibQDTIyWw
— BJP Karnataka (@BJP4Karnataka) January 9, 2022