ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ಸರಕಾರ ಹಿಂದೆ ಸರಿಯುವುದಿಲ್ಲ ಎಂದರು.
ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ಕೇಂದ್ರದಿಂದ ಎಲ್ಲ ಒಪ್ಪಿಗೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಇವೆ. ಮುಂಗಡ ಪತ್ರದಲ್ಲೂ ಯೋಜನೆಯನ್ನು ಪ್ರಸ್ತಾಪ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು.
ತಮಿಳುನಾಡು ಮುಖ್ಯಮಂತ್ರಿಗಳ ಸಹಕಾರ ಪಡೆಯಲು ಸರಕಾರ ಪ್ರಯತ್ನಿಸಿದೆ. ನಮ್ಮ ಪಾಲು ನೀರನ್ನು ಮಾತ್ರ ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ತಮಿಳುನಾಡು ಪಾಳಿನ ನೀರನ್ನು ಯಾವ ಕಾರಣಕ್ಕೂ ರಾಜ್ಯ ತಡೆಯುವುದಿಲ್ಲ ಎಂದವರು ಹೇಳಿದರು.