ಬೆಂಗಳೂರು: ನೀರು, ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಬಗ್ಗೆ ಯಾವುದೇ ತರದ ಅವಸರದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ ಆಯಾಮಗಳಲ್ಲಿ ಈ ದರ ಏರಿಕೆ ಬಗ್ಗೆ ಪರಿಶೀಲಿಸಲಾಗುವುದು. ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.