ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ಬೆಂಗಳೂರಿನ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಚಿವರನ್ನು ಭೇಟಿಯಾಗಿ ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದರು.

ವಕೀಲರ ರಕ್ಷಣಾ ಕಾಯ್ದೆಯಲ್ಲಿ ಕಠಿಣ ಶಿಕ್ಷೆ ಹಾಗೂ ಜಾಮೀನು ರಹಿತ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಸೇರ್ಪಡೆಗೊಳಿಸಬೇಕು. ವಕೀಲರ ಹತ್ಯೆ ಮತ್ತು ಹಲ್ಲೆ ಪ್ರಕರಣಗಳ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘದ ಪ್ರತಿನಿಧಿಗಳು ಆಗ್ರಹಿಸಿದರು.
ವಕೀಲರ ಸುರಕ್ಷತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿಯನ್ನು ಸ್ವೀಕರಿಸಲಾಗಿದ್ದು, ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ವಕೀಲರ ಸಂಘದ ಪದಾಧಿಕಾರಿಗಳು, ಮತ್ತು ಪ್ರತಿನಿಧಿಗಳು ಇಂದು ಭೇಟಿಯಾಗಿ ವಿವಿಧ ಅಹವಾಲುಗಳ ಕುರಿತ ಅವರ ಮನವಿಯನ್ನು ಸ್ವೀಕರಿಸಿ ನಡೆಸಲಾಯಿತು.
ವಕೀಲರ ರಕ್ಷಣಾ ಕಾಯ್ದೆಗೆ ಕಠಿಣ ಹಾಗೂ ಜಾಮೀನು ರಹಿತ ಅಪರಾಧದ ಅಂಶಗಳನ್ನು ಸೇರ್ಪಡೆಗೊಳಿಸಬೇಕು, ವಕೀಲ ಹತ್ಯೆ ಮತ್ತು ಹಲ್ಲೆಯ ಆರೋಪಿಗಳ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತಂತೆ ವಕೀಲರ ಸಂಘದ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2026















































































