ಬೆಂಗಳೂರು: ಕೊರೊನಾ ಸೊಂಕು ನಿಯಂತ್ರಣ ಸಾಧಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೆ.ಅರ.ಪುರ ವಿಧಾನ ಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ ಕಾರ್ಮಿಕರಿಗೆ ಶಾಸಕರು ಆದ ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿವರಿಸಿದರು.
ಕೆ.ಅರ್. ಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ದಿನಸಿ ವಿತರಿಸಿ ಮಾತನಾಡಿದ ಬಸವರಾಜ ಅವರು ಇನ್ನೂ ಅಗತ್ಯ ಬಿದ್ದಲ್ಲಿ ಮತ್ತೆ ಬಡಜನರಿಗೆ ನೀಡುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಎಲ್ಲರಿಗೂ ಕೊರೊನಾ ನಿಯಂತ್ರಣ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ ಎಂದರು.
ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಗುರಿ ಹೊಂದಿದೆ. 200 ಹಾಸಿಗೆಗಳ ಆಸ್ಪತ್ರೆಗೆ ಉನ್ನತಿಕರಿಸಲು 13 ಕೋಟಿ ರೂಪಾಯಿಗಳು ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.
2. ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ನಿಯಂತ್ರಣ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡರು ಹೇಳಿದರು.
ಜೂನ್ ಅಂತ್ಯದ ವೇಳೆಗೆ ರಾಜ್ಯಕ್ಕೆ ಕೇಂದ್ರದಿಂದ 50 ಲಕ್ಷ ಲಸಿಕೆ ನೀಡಲಾಗುತ್ತದೆ, ರಾಜ್ಯ ಸರ್ಕಾರ ಕೂಡ 15 ಲಕ್ಷ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷ ದಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದರು.
ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ಆಹಾರ ಪದಾರ್ಥಗಳನ್ನು ಬೈರತಿ ಬಸವರಾಜ ಅವರು ವಿತರಣೆ ಮಾಡುತ್ತಿರುವುದು ನಿಜವಾಗಿಯೂ ಒಂದು ಪುಣ್ಯದ ಕೆಲಸ ಎಂದರು.
ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದು ಅಶಿಸುತ್ತೇನೆ ಎಂದರು.
ಕೆ ಅರ್ ಪುರ ವಿಧಾನ ಸಭಾ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಒಂದು ವಿಧಾನ ಸಭಾ ಕ್ಷೇತ್ರವಾಗಿದೆ. ಇದನ್ನು ಸಚಿವರಾದ ಶ್ರೀ ಬಸವರಾಜ ಅವರು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಕುರಿತು ಸಭೆ ಕರೆದಾಗಲ್ಲೆಲ್ಲ ನಾನು ಕೆ ಅರ್ ಪುರ ಕ್ಷೇತ್ರದ ಬಗ್ಗೆ ಮತ್ತು ಬೈರತಿ ಬಸವರಾಜ ಅವರು ಅಲ್ಲಿ ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದರು.
3. ದಿನಸಿ ಕಿಟ್ ವಿತರಿಸಿದ ಸ್ಥಳಗಳು:-
ಕೂತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪ, ವಿಜನಾಪುರದ ಸೈನಿಕ ಭವನ, ಕಲ್ಕರೆಯ ಎನ್. ಅರ್.ಐ ಲೇಔಟ್, ಟಿ.ಸಿ.ಪಾಳ್ಯದ ಸಂತ ಅಂತೋಣಿ ಶಾಲೆ, ಕುರುಡುಸೊಣ್ಣೆನಹಳ್ಳಿಯ ಲೇಕ್ ಮೌಂಟ್ ಶಾಲೆ, ಎಚ್.ಎ.ಎಲ್ ನ ವಿಭೂತಿ ಪುರ ಶಾಲೆ, ಉದಯ ನಗರದ ಜೈನ ಭವನ, ಎ.ನಾರಾಯಣಪುರ ದ ಎಮ್.ಇ.ಜಿ ಲೇಔಟ್, ದೇವಸಂದ್ರದ ಕೆಂಪೇಗೌಡ ಕ್ರೀಡಾಂಗಣ.
ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕೆ ಅರ್ ಪುರ ಬಿಜೆಪಿ ಅಧ್ಯಕ್ಷರಾದ ಶಿವರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚದ ಅಧ್ಯಕೆ ಗೀತಾ ವಿವೇಕಾನಂದ, ಬಿಜೆಪಿ ಹಿರಿಯ ಮುಖಂಡರಾದ ಗಣೇಶ, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಶ್ರೀಕಾಂತ್, ಜಯಪ್ರಕಾಶ್, ನಾಗರಾಜ್, ಸುರೇಶ್, ರಮೇಶ್, ಅಂತೋಣಿ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.