ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಟ್ವಿಟ್ಟರ್ ಖಾತೆ @NiraniMurugesh ಹ್ಯಾಕ್ ಮಾಡಲಾಗಿದೆ.
ಯಾರೋ ಕಿಡಿಗೇಡಿಗಳು ನಿರಾಣಿ ಅವರ ಟ್ವಿಟರ್ ಖಾತೆ@NiraniMurugeshಯನ್ನು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಿದ್ದಾರೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ ಎಂದು ಸಚಿವರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಚಿವ ಮುರುಗೇಶ್ ನಿರಾಣಿ, ಹ್ಯಾಕರ್ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು ಮನವಿ ಮಾಡಿದ್ದಾರೆ.
ನಾವು ಟ್ವಿಟರ್ಗೆ ದೂರು ನೀಡಿದ್ದೇವೆ. ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ ಎಂದವರು ಹೇಳಿದ್ದಾರೆ.
ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು.