ದೊಡ್ಡಬಳ್ಳಾಪುರ ಸಮೀಪದ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾರ್ತಿಕ ಸೋಮವಾರದಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶ್ರೀ ಕೃಷ್ಣದೇವರಾಯ ಮಹಾರಾಜರು ಹಂಪೆ ಅವರು ಭೇಟಿ ನೀಡಿ ಆಗಮಿಸಿದ್ದು ವಿಶೇಷ ಪೂಜೆ ಸಲ್ಲಿಸಿದರು.
ಕಾರ್ತಿಕ ಸೋಮವಾರದಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ವೇಗುಳಕ್ಕೆ ಭೇಟಿ ನೀಡಿ ಕೈಂಕರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಾಸಕರು ಧೀರಜ್ ಮುನಿರಾಜು ಕೂಡಾ ಉಪಸ್ಥಿತರಿದ್ದರು. ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತರು ಪಿ ದಿನೇಶ್, ಮುಜರಾಯಿ ತಹಶೀಲ್ದಾರ್ ಜಿ.ಜೆ ಹೇಮಾವತಿ , ಪ್ರಧಾನ ಅರ್ಚಕ ಶ್ರೀನಿಧಿ ಶರ್ಮ ಸಹಿತ ದೇವಾಲಯದ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.


















































