ದೆಹಲಿ: ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಿಗೆ ಮೋದಿ ಸಂಪುಟದಲ್ಲಿ ಮತ್ತಷ್ಟು ಇಲಾಖೆ ಇಲಾಖೆಯ ಹೊಣೆ ವಹಿಸಲಾಗಿದೆ. ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಇಲಾಖೆ ಹಾಗೂ ರಾಜೀವ್ ಚಂದ್ರಶೇಖರ್ ಅವರಿಗೆ ಜಲಶಕ್ತಿಯ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಕೇಂದ್ರ ಸಚಿವರ ರಾಜೀನಾಮೆಯಿಂದ ತೆರವಾಗಿರುವ ಇಲಾಖೆಗಳನ್ನು ಈ ಮಂತ್ರಿಗಳಿಗೆ ಹಂಚಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸ್ಥಾನಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರು ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸುಥತಿದ್ದಂತೆಯೇ ತೆರವಾಗಿರುವ ಸ್ಥಾನಗಳನ್ನು ಹೆಚ್ಚುವರಿ ಜವಾಬ್ಧಾರಿಯಾಗಿ ಇತರ ಮಂತ್ರಿಗಳಿಗೆ ಪ್ರಧಾನಿ ಮೋದಿಯವರು ವಹಿಸಿಕೊಟ್ಟಿದ್ದಾರೆ.
ಕೃಷಿ ಇಲಾಖೆಯ ಹೊಣೆಗಾರಿಕೆಯನ್ನು ಹೆಚ್ಚುವರಿಯಗಿ ಸಚಿವ ಅರ್ಜುನ್ ಮುಂಡಾ ಅವರಿಗೆ ವಹಿಸಲಾಗಿದೆ.
ಕೇಂದ್ರ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿಯಾಗಿ ಜಲಶಕ್ತಿ ಸಚಿವಾಲಯದ ಹೊಣೆ , ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣಾ ಉದ್ಯಮ ಇಲಾಖೆಯ ಜವಾಬ್ದಾರಿ ಹಾಗೂ ಎಂಒಎಸ್ ಭಾರ್ತಿ ಪ್ರವೀಣ್ ಪವಾರ್ ಅವರಿಗೆ ಬುಡಕಟ್ಟುಗಳ ವ್ಯವಹಾರಗಳ ರಾಜ್ಯ ಖಾತೆಯ ಹೊಣೆಗಾರಿಕೆ ವಹಿಸಲಾಗಿದೆ ಎಂದು ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.