ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.
ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid
— Sunil Kumar Karkala (@karkalasunil) May 1, 2025