ಬೆಂಗಳೂರು: ಬಿಜೆಪಿ ಶಾಸಕ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಬಾನುವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.





















































