ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದರು
ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ ಕ್ವಾರಿ ಮಾಲೀಕರು, ಲಾರಿ ಮಾಲೀಕರು, ರೈತರು ಹಾಗೂ ಕೂಲಿ ಕಾರ್ಮಿಕರ ಸಹಿತ ವಿವಿಧ ಕಟ್ಟಡ ಕಾಮಗಾರಿಗಳಿಗೆ ಸಾಮಾಗ್ರಿಗಳು ದೊರೆಯದೇ ಇಡೀ ಜಿಲ್ಲೆಯು ತೊಂದರೆಗೊಳಗಾದ ಬಗ್ಗೆ ಮತ್ತು ಜಿಲ್ಲಾಡಳಿತವು ಏಕಾಏಕಿ ಕೆಂಪು ಕಲ್ಲು ತೆಗೆಯುವ ಸಂಬಂಧ 3AB ನಡಿ ನೀಡಿರುವ ಅನುಮತಿಗಳನ್ನು ರದ್ದು ಪಡಿಸಿರುವ ಬಗ್ಗೆ ಈ ಶಾಸಕರು ಸಚಿವರ ಗಮನಸೆಳೆದರು.
ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಹಾಗೂ ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಇರುವಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ಹಿಂದೆ ನೀಡುತ್ತಿದ್ದಂತೆ 3A ನಡಿ ಕೆಂಪು ಕಲ್ಲು ತೆಗೆಯಲು ಈ ಕೂಡಲೇ ಅನುಮತಿ ನೀಡುವಂತೆ ಆಗ್ರಹಿಸಲಾಯಿತು ಎಂದು ಶಾಸಕರು ತಿಳಿಸಿದ್ದಾರೆ.
ತಮ್ಮ ಮನವಿಗೆ ಸ್ಪಂದಿಸಿದ ಸಚಿವರು ಇಲಾಖೆಯ ಯಾವುದೇ ವಿಳಂಬ ಮಾಡದೇ ಸಮಸ್ಯೆಯನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಶಾಸಕರು ತಿಳಿಸಿದ್ದಾರೆ.