ದಾವಣಗೆರೆ: ಕಾಂಗ್ರೆಸ್ ನಾಯಕ ಮಾಜಿ ಸಚಿವ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ತೆರಳಿದ್ದ ಯು.ಟಿ. ಖಾದರ್ ಅವರಿದ್ದ ಕಾರು ಮಾರ್ಗ ಮಧ್ಯೆ, ದಾವಣಗೆರೆ ಜಿಲ್ಲೆ ಅನಗೋಡು ಬಸ್ ನಿಲ್ದಾಣದ ಸಮೀಪ ಖಾದರ್ ಅವರಿದ್ದ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಯು.ಟಿ.ಖಾದರ್ ಅವರಿದ್ದ ಇನ್ನೋವಾ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.