ತುಮಕೂರು: ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಚುನಾವಣೆಯಲ್ಲಿ ಮತದಾರರು ಜಾತಿ,ಹಣ ಸೇರಿದಂತೆ ಯಾವುದೇ ಪ್ರಭಾವಕ್ಕೆ ಒಳಗಾಗದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಮತ ನೀಡಬೇಕೆಂದು ವಿಧಾನಪರಿಷತ್ತಿನ ಉಪಸಭಾನಾನಯಕರೂ ಆಗಿರುವ ಬಿಜೆಪಿ ಮುಖಂಡ ಡಾ.ವೈ.ಎ.ನಾರಾಯಣಸ್ವಾಮಿ ಕರೆ ನೀಡಿದ್ದಾರೆ.
ತುಮಕೂರಿನಲ್ಲಿ ಭಾರತೀಯ ಜನತಾಪಕ್ಷ ರಾಜ್ಯ ಘಟಕ ವತಿಯಿಂದ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈ.ಎ.ನಾರಾಯಣಸ್ವಾಮಿ, ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಸಿಗುವಂತೆ ಮಾಡಿ ಗ್ರಾಮ ಪಂಚಾಯಿತಿಗಳ್ನು ಸಶಕ್ತಗೊಳಿಸಲು ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರೊಂದಿಗೆ ಪ್ರಜಾಪ್ರಭುತ್ವದ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಸ್ಥಳೀಯ ಸಂಸ್ಥೆಗಳನ್ನು ಮತ್ತಷ್ಟು ಬಲಗೊಳಿಸಲು ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಸಮಾವೇಶಕ್ಕೂ ಮುನ್ನ ಡಾ.ವೈ.ಎ.ನಾರಾಯಣಸ್ವಾಮಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
























































