ಬೆಂಗಳೂರು: ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಏಪ್ರಿಲ್ 6 ರಂದು ಬೆಳಿಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪೆರೆನ್ಸ್ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅಂದು ಕಾರ್ಯಕರ್ತರಿಗೆ ಪ್ರಧಾನಿಯವರು ಸಂದೇಶ ನೀಡುವ ಸುಳಿವು ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು www.bjplive.org, twitter.com/BJP4India, facebook.com/BJP4India, youtube.com/BJP4India, www.bjp.org ಸಹಿತ ವಿವಿಧ ಸಾಮಾಜಿಕ ಜಾಲತಾಣಗಳನ್ನು ನೇರಪ್ರಸಾರ ಮಾಡಲಾಗುವುದು. ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ರಚನಾತ್ಮಕ ಕಾರ್ಯಕ್ರಮ: ನಳಿನ್ ಘೋಷಣೆ
ಪಕ್ಷದ ಸ್ಥಾಪನಾ ದಿನವಾದ ಏಪ್ರಿಲ್ 6ರಂದು ಸ್ವಚ್ಛತಾ ಕಾರ್ಯಕ್ರಮ, ಏಕಬಳಕೆ ಪ್ಲಾಸ್ಟಿಕ್ ಬಳಕೆ ಉಪಯೋಗವನ್ನು ತೊರೆಯುವ ಸಂಕಲ್ಪ, ಹಿರಿಯ ನಾಗರಿಕರಿಗೆ ಸನ್ಮಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವದಂಥ ರಚನಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ಸ್ಥಾಪನೆ, ವಿಕಾಸದ ಹಾದಿಯ ಕುರಿತು ಚರ್ಚಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಅವುಗಳ ಅನುಷ್ಠಾನದ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.