ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು, ಏಪ್ರಿಲ್ 20 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಏಪ್ರಿಲ್ 20 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು, ಏಪ್ರಿಲ್ 21 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ, ಏಪ್ರಿಲ್ 23 ಮತ್ತು 24 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಏಪ್ರಿಲ್ 24 ರಂದು ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿಗಳಾದ ಶ್ರೀ ಯೋಗಿ… pic.twitter.com/Xcoe0lrkBK
— BJP Karnataka (@BJP4Karnataka) April 17, 2024
ಏಪ್ರಿಲ್ 21 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ, ಏಪ್ರಿಲ್ 23 ಮತ್ತು 24 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಏಪ್ರಿಲ್ 24 ರಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯ ಪ್ರವಾಸ ಕೈಗೊಂಡು ವಿವಿಧ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ.