ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ. ಅನ್ನದಾತರಿಗೆ ಆಧಾರವಾಗಿ ಮಹತ್ವದ ಘೋಷಣೆಯನ್ನು ಕೇಂದ್ರ ಸರ್ಕಾರ ಮಡಿದೆ.
ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿದೆ ಎಂದರು.
2300 ರೂಪಾಯಿ ದರದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದವರು ತಿಳಿಸಿದರು. 2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ 1310 ರೂಪಾಯಿ ಇತ್ತು. ಇದೀಗ ಅದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.
ಇದೇ ವೇಳೆ, 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮ ಕ್ರಮ ಕೈಗೊಂಡಿದೆ ಎಂದೂ ಅವರು ಮಾಹಿತಿ ನೀಡಿದರು.