ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಏಳು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರ ದಕ್ಷಿಣದ 28ನೇ ಮಣ್ಣಗುಡ್ಡೆ ವಾರ್ಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.