ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದು ಕಮಲ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮುಂಬರುವ ಚುನಾವಣೆಯ ತಯಾರಿಯಲ್ಲಿರುವ ಬಿಜೆಪಿಗೆ ಮೋದಿ ಟಾನಿಕ್ ನೀಡಲಿದ್ದಾರೆ. ಮೋದಿ ಅವರ ಈ ಕಾರ್ಯಕ್ರಮವನ್ನು ಪಕ್ಷದ ಶಕ್ತಿ ಪ್ರದರ್ಶನವನ್ನಾಗಿಸಲು ಕಮಲ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಅಶ್ವಥ್ ನಾರಾಯಣ್, ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ ನಾರಾಯಣ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ ಮತ್ತು ಪ್ರಮುಖರು ಉಪಸ್ಥಿತರಿದ್ದರು.
























































