ಬೆಂಗಳೂರು: ಮೈಸೂರು, ಮಂಗಳೂರಿನಲ್ಲಿ ಮೇನಿಯಾ ಸೃಷ್ಟಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಎರಡನೇ ಬಾರಿಗೆ ಕರ್ನಾಟಕಕ್ಕೆ ಆಹ್ವಾನಿಸಿದೆ.
ಈಗಾಗಲೇ ಮೈಸೂರು, ಮಂಗಳೂರು ನಗರಗಳಲ್ಲಿ ಪ್ರಚಾರ ಕೈಗೊಂಡ ಮೋಡಿ, ಈ ತಿಂಗಳ 20ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಎಪ್ರಿಲ್ 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಾಗೂ ತುಮಕೂರು ಅಥವಾ ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ ಹಮ್ಮಿಕೊಳ್ಳಲು ಬಿಜೆಪಿ ತಯಾರಿ ನಡೆಸಿದೆ. ಈ ಪ್ರಚಾರ ಕಾರ್ಯಕ್ರಮಗಳಲ್ಲಿ ಮೋದಿ ಬಗವಹಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


























































