ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಇಂದಿನಿಂದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸಹಿತ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಯಲುಸೀಮೆ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



















































