ದೆಹಲಿ: ಇದೀಗ ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಮಂಗಳವಾರದ ಅಂಕಿ ಅಂಶಗಳ ಪ್ರಕಾರ ಒಂದೇ ದಿನ 1,84,372 ಹೊಸ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದೆ.
ಇದೇ ವೇಳೆ, ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿಅಂಶ ಪೇರಿಸಿದೆ. ಒಂದೇ 1,027 ಜನರು ಕೋವಿಡ್ ಸೋಂಕಿದೆ ಬಲಿಯಾಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 1,72,085ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ನಡುವೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸಿದೆ.