ಬೆಂಗಳೂರು: ಹಿರಿಯ ಚಿತ್ರ ನಿರ್ದೇಶಕ ರೇಣುಕಾಶರ್ಮ ಅವರ ನಿಧನಕ್ಕೆ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ.
ಕೋವಿಡ್ ನಿಂದಾಗಿ ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗಾಗಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಜೀವ ತೆತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಚಿತ್ರ ನಿರ್ದೇಶಕ ರೇಣುಕಾಶರ್ಮ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಕೋವಿಡ್ ನಿಂದಾಗಿ ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಜೀವ ತೆತ್ತಿರುವುದು ಅತ್ಯಂತ ನೋವಿನ ಸಂಗತಿ.
1/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 6, 2021
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅವರ ಅತ್ಯಂತ ಯಶಸ್ವಿ ಚಿತ್ರವಾಗಿತ್ತು. ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಭರ್ಜರಿ ಗಂಡು, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು ಎಂದು ನೆನಪಿಸಿದ್ದಾರೆ.
ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅವರ ಅತ್ಯಂತ ಯಶಸ್ವಿ ಚಿತ್ರವಾಗಿತ್ತು. ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಭರ್ಜರಿ ಗಂಡು, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.
2/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 6, 2021
ಅವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದವರು ಹೇಳಿದ್ದಾರೆ.
ಅವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
3/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 6, 2021