ಬೆಂಗಳೂರು: ಸಿನಿ ರಸಿಕರಿಗೆ ಒಂದರ ಹಿಂದೊಂದರಂತೆಸಿಹಿ ಸುದ್ದಿ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಬಾಕ್ಸ್ ಆಫೀಸನ್ನು ಚಿಂದಿ ಮಾಡಿದೆ. ಅಭಿಮಾನಿ ಲೋಕವನ್ನು ಸೂಜಿಗಲ್ಲಿನಂತೆ ಈ ಸಿನಿಮಾ ಸೆಳೆಯುತ್ತಿದ್ದು ಲಾಕ್‌ಡೌನ್ ನಂತರ ಸಿನಿಮಾ ಕ್ಷೇತ್ರದಲ್ಲಿ ಭರವಸೆಯನ್ನು ಇದು ಹೆಚ್ಚಿಸಿದೆ.
ಇದೇ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕಿಚ್ಚ ಸುದೀಪ್ ನಟಬೆಯ ಕೋಟಿಗೊಬ್ಬ-3 ಚಿತ್ರ ಕೂಡಾ ಕಮಾಲ್ ಮಾಡಲು ಸಿದ್ದವಾಗಿದೆ ಆದರೆ ಅಷ್ಟರಲ್ಲೇ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಸೀಟು ಭರ್ತಿಯ ಷರತ್ತಿನ ಮಾತುಗಳು ಕೇಳಿಬಂದಿವೆ. ಆದರೆ ಈ ರೀತಿಯ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದಿದ್ದಾರೆ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ.
— CM of Karnataka (@CMofKarnataka) March 19, 2021