ಮುಂಬೈ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮಿಳು ಮೂವಿ ‘ಓಟು ಸೇರಪ್ಪು ಸೈಜ್ 7’ರ ಶೂಟಿಂಗ್‌ನ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ‘ಓಟು ಸೇರಪ್ಪು ಸೈಜ್ 7’ ಚಿತ್ರದ ಹಿಂದಿ ರಿಮೇಕ್‌ಗೆ ಕೆಲವು ಸನ್ನಿವೇಶಗಳ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಸಂದರ್ಭದಲ್ಲಿ ಅವಘಡ ಸಂಭವಿಸಿ, ಅಭಿಷೇಕ್ ಬಚ್ಚನ್ ಅವರ ಕೈಗೆ ಗಾಯವಾಗಿದ್ದೆ ಎನ್ನಲಾಗಿದೆ. ಬಳಿಕ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ.