ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.
ಇಂಗ್ಲಿಷ್ ಭಾಷೆಯಲ್ಲೂ “ಉದಯ ನ್ಯೂಸ್” ಲಭ್ಯ
Karnataka HC quashes plea seeking CBI probe against CM Siddaramaiah in MUDA case
ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ತೀರ್ಪು ಕುರಿತಂತೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ತಾವು ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಪುನರುಚ್ಚರಿಸಿರುವ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.