ಮೈಸೂರು: ಮುಡುಕುತೊರೆ ಶ್ರೀ ಕ್ಷೇತ್ರದಲ್ಲಿ ಶ್ರೀ ಭ್ರಮರಾಂಬಾ ಸಮೇತ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಸಂಕೀರ್ಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಲಾನ್ಯಾಸ ನೆರವೇರಿಸಿದರು.
ಇದೇ ವೇಳೆ ದೇವಸ್ಥಾನದ ವಿನ್ಯಾಸ ಹಾಗೂ ಪುನರ್ ನಿರ್ಮಾಣದ ವಿಡಿಯೋವನ್ನು ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.