ಬೆಂಗಳೂರು: ಸುಮಾರು 12 ವರ್ಷಗಳ ನಂತರ ಮತ್ತೊಮ್ಮೆ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಕೈದಿ ನಂಬರ್ 6109. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಗ್ಯಾಂಗ್ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಬಂಧಿತ ಅರೊಪಿಗಳ ಪೈಕಿ ನಟ ದರ್ಶನ್ ಸಹಿತ ನಾಲ್ವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಪೊಲೀಸರು, ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶನಿವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಬೆಂಗಳೂರು ಎಸಿಎಂಎಂ ನ್ಯಾಯಾಲಯವು ದರ್ಶನ್, ವಿನಯ್, ಪ್ರದೂಷ್ ಹಾಗೂ ಧನರಾಜ್ ಅಲಿಯಾಸ್ ರಾಜನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ ನಟ ದರ್ಶನ್‌ಗೆ ವಿಚಾರಣಾಧೀನ ಕೈದಿ ನಂಬರ್ 6109 ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
13 ವರ್ಷಗಳ ಹಿಂದೆ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ 52 ದಿನ ಜೈಲುವಾಸ ಅನುಭವಿಸಿದ್ದರು. ಇದೀಗ ಕೊಲೆ ಕೇಸಿನಲ್ಲಿ ಬಂಧನಕ್ಕೊಳಗಾಗಿ 2ನೇ ಬಾರಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.