ಕಲಬುರಗಿ: ಬಿಜೆಪಿಯ ಹಿರಿಯ ಮುಖಂಡರು ಮತ್ತು ಕಲಬುರಗಿಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷರಾದ ಬಸವರಾಜ್ ಪಾಟೀಲ್ ಸೇಡಂ ಅವರನ್ನು ಗುರು ಪೂರ್ಣಿಮೆಯ ದಿನದಂದು ಕಲಬುರಗಿಯ ಅವರ ನಿವಾಸದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಮುರುಗೇಶ್ ಆರ್ ನಿರಾಣಿ ಅವರು ಭೇಟಿ ಮಾಡಿ ಅವರಿಂದ ಆಶೀರ್ವಾದವನ್ನು ಪಡೆದುಕೊಂಡರು.
ಈ ವೇಳೆ ಮಾತನಾಡಿದ ನಿರಾಣಿ ಅವರು ಗುರುಪೂರ್ಣಿಮೆಯ ದಿನದಂದು ಬಸವರಾಜ್ ಪಾಟೀಲ್ ಸೇಡಂ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದು ಖುಷಿಯಾಗಿದೆ. ಅವರು ಬಿಜೆಪಿ ಕಂಡ ಅದ್ಭುತ ರಾಜಕಾರಣಿ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಅವರು ಹಾಕಿಕೊಟ್ಟ ದಾರಿ ಹಾಗೂ ಆಡಳಿತದ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು. ಈ ವೇಳೆ ಶಾಸಕ ದತ್ತಾತ್ರೇಯ ಚಂದ್ರಶೇಖರ್ ಪಾಟೀಲ್ ರೇವೂರ್ ಹಾಗೂ ಇತರರು ಉಪಸ್ಥಿತರಿದ್ದರು.



























































