ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೆ ಹಾಗೂ ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಇಂದೂ ಕೂಡಾ ಭಾರಿ ಪ್ರತಿಭಟನೆ ನಡೆಸಿತು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ನರೇಂದ್ರ ಸ್ವಾಮಿ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ವೆಂಕಟೇಶ್, ವಾಸು, ಸೋಮಶೇಖರ್, ಮಾಜಿ ಸಂಸದ ಶಿವಣ್ಣ, ನಗರ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಹಾಜರಿದ್ದರು.