ಮೈಸೂರು: ಅರಮನೆಯ ಪೂರ್ವದಿಕ್ಕಿನ ಜಯಮಾರ್ತಾಂಡ ಮಹಾದ್ವಾರದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾರ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳಿಕ ಪೊಲೀಸ್ ಇಲಾಖೆ ವತಿಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗಾರ್ಡ್ ಆಫ್ ಆನರ್ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.45 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಭದ ಮೂಲಕ ಅರಮನೆಯ ಆನೆ ಬಾಗಿಲಿಗೆ ಗಜೆಪಡೆಗಳನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಅಲ್ಲಿ ಗಜಪಡೆಗಳಿಗೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು.