ಮೈಸೂರು: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಹಕಾರ ಮಂತ್ರಿ ಎಸ್.ಟಿ. ಸೋಮಶೇಖರ್ ಅವರು ಇಂದು ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಹಳೆಯ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮಾಡಿದರು.
ನಂತರ ಮಾತನಾಡಿದ ಸಚಿವ ಬಸವರಾಜ್, ಮೈಸೂರಿನ ಲ್ಯಾನ್ಸ್ ಡೌನ್ ಕಟ್ಟಡ ವೀಕ್ಷಣೆ ಮಾಡಿ, ಅದು ತುಂಬಾ ಹಳೆಯದಾಗಿದ್ದು ನವೀಕರಣ ಕಾರ್ಯ ಮಾಡಲು ಸಾಧ್ಯವಿಲ್ಲ, ಹೀಗಾಗಿ ಅದನ್ನು ಕೆಡವಿ ಅದೇ ಮಾದರಿಯ ಹೊಸ ಕಟ್ಟಡ ನಿರ್ಮಾಣ ಮಾಡಬೇಕಾಗುತ್ತದೆ ಎಂದರು.
ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ತುಂಬಾ ಶೀತಲ ವ್ಯವಸ್ಥೆಗೆ ತಲುಪಿರುವ ಕಟ್ಟಡಗಳನ್ನು ನೆಲಸಮ ಮಾಡಿ ಅದೇ ಜಾಗದಲ್ಲಿ ಅದೇ ಪಾರಂಪರಿಕ ಮಾದರಿಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಚಿಂತನೆ ಇದೆ ಎಂದರು.
ಜಿಲ್ಲಾಧಿಕಾರಿ ಬಗಾದಿ ಗೌತಮ, ಮಹಾನಗರ ಪಾಲಿಕೆ ಅಯುಕ್ತರಾದ ಲಕ್ಷ್ಮೀ ಕಾಂತ ರೆಡ್ಡಿ ಸೇರಿದಂತೆ ಹಲ ಅಧಿಕಾರಿಗಳು ಉಪಸ್ಥಿತರಿದ್ದರು.