ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಅದ್ದೂರಿಯಾಗಿ ನೆರವೇರಿದೆ. ವಿಜಯದಶಮಿ ದಿನವಾದ ಇಂದು ಮೈಸೂರು ಅರಮನೆ ಮುಂಬಾಗ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ,ಶಿವಕುಮಾರ್ ಸೇರಿದಂತೆ ಸಚಿವರು ಅಧಿಕಾರಿಗಳು, ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗಿದ ಸನ್ನಿವೇಶ ಗಮನಸೆಳೆಯಿತು. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದವು. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗಿದ ಜಂಬೂಸವಾರಿ ಮೆರವಣಿಗೆಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ವಿಶೇಷ ಆಕರ್ಷಣೆಗೆ ಪಾತ್ರವಾದವು. ಸುಮಾರು 5ರಿಂದ 7 ಕಿಲೋ ಮೀಟರ್ ವರೆಗೆ ಜಂಬೂ ಸವಾರಿ ಸಾಗಿದ್ದು ರಾಜರಸ್ತೆಯ ಇಕ್ಕೆಲೆಗಳಲ್ಲಿ ಜನಸ್ತೋಮ ಈ ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿತು.
ಶತಮಾನಗಳ ಇತಿಹಾಸ ಹೊಂದಿರುವ ಮೈಸೂರು ದಸರಾ ಕರ್ನಾಟಕದ ಕೀರ್ತಿಯ ಕಳಶ. ಅಂಬಾರಿಯಲ್ಲಿ ವೀರಾಜಮಾನಳಾಗಿರುವ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿಗಳೊಂದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದೆ. pic.twitter.com/tfFXdzcSwH
— DK Shivakumar (@DKShivakumar) October 24, 2023