ಮುಂಬೈ: ದೇಶದಲ್ಲಿ ಬಿಸಿಲಿನ ತಾಪದಿಂದಾಗಿ ಜನರು ಬೇಸತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಮಾರಣ ಹೋಮವೇ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಬಿಸಿಲಿನ ತಾಪದಿಂದಾಗಿ 13 ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ವತಿಯಿಂದ ಭಾನುವಾರ ನವಿ ಮುಂಬಯಿಯಲ್ಲಿ ನಡೆದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
https://twitter.com/ashoswai/status/1647702760396054530?t=T1wrW2ITWRSzFK8-n1feUA&s=19
ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಆದರೆ ಬಿಸಿಲಿನ ತಾಪದಿಂದ ಬೆಂದು 13 ಮಂದಿ ಸಾವನ್ನಪ್ಪಿದ್ದಾರೆ, ಸುಮಾರು 600 ಜನರು ಅಸ್ವಸ್ಥಗೊಂಡಿದ್ದಾರೆ. ಮೃತರ ಪೈಕಿ 8 ಜನ ಮಹಿಳೆಯರು ಸೇರಿದ್ದು, ಹೆಚ್ಚಾಗಿ ವೃದ್ಧರೇ ಆಗಿದ್ದಾರೆ. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಮೃತರ ಸಂಬಂಧಿಕರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.