ಬೆಂಗಳೂರು: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದ್ದಾರೆ.
ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.