ಬೆಂಗಳೂರು ; ಮುಖ್ಯಮಂತ್ರಿ ಆಯ್ಕೆಗಾಗಿ ತಾವು ಯಾವುದೇ ರೀತಿ ಲಾಭಿ ಮಾಡಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ನಾನೆಂದೂ ಲಾಬಿ ಮಾಡಿ ಅಧಿಕಾರ ಗಿಟ್ಟಿಸಿಕೊಂಡಿಲ್ಲ ಎಂದರು. ಯಾರಿಗೆ ಅವಕಾಶ ಕೊಟ್ಟರು ಸಂತೋಷದಿಂದ ಸ್ವೀಕಾರ ಮಾಡುತ್ತೇನೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದು ತುಂಬಾ ನೋವಾಗಿದೆ ಎಂದವರು ಪ್ರತಿಕ್ರಿಯಿಸಿದರು.