NWKRTCಗೆ ನೇಮಗೊಂಡ ಚಾಲಕರ ಕೈಗೆ ನೇಮಕಾತಿ ಪತ್ರ.. ಈ ಸರ್ಕಾರದ ಅವಧಿಯಲ್ಲಿ KSRTC ಸಮೂಹಕ್ಕೆ 1000 ಚಾಲಕ-ನಿರ್ವಾಹಕರ ನೇಮಕ..! ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರರಿಸಲಾಯಿತು. ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನೂ ಅನಾವರಣ ಮಾಡಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದರು. 46 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಸಚಿವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, 2019 ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ದೇಶದಲ್ಲೆಡೆ ಹರಡಿದ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಾ.ಕ.ರ.ಸಾ. ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಸಂಪೂರ್ಣ ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಭರಮಗೌಡ ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಗಳ ಅವಶ್ಯಕತೆ ಇದೆ ಹಾಗಾಗಿ ಮತ್ತೋಮ್ಮೆ ಚಾಲನಾ ಸಿಬ್ಬಂದಿ ನೇಮಕಾತಿಯನ್ನು ಪ್ರಾರಂಭಿಸಿದರೆ ಪುನಃ ಸಂಸ್ಥೆಗೆ ಖರ್ಚು ವೆಚ್ಚವಾಗುತ್ತದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ವಿಶೇಷ ಹೆಚ್ಚು ಅನುದಾನವನ್ನು ಸರಕಾರದಿಂದ ದೊರಕಿಸಿ ಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ, ಸಾರಿಗೆ ನಿಗಮಗಳ ಅಧಿಕಾರಿಗಳಾದ ಎಂ.ಪ್ರಿಯಾಂಗಾ, ಅಕ್ರಂ ಪಾಷಾ, ಆರ್. ರಾಮಚಂದ್ರನ್, ಎಮ್. ರಾಚಪ್ಪ, ಡಾ. ನಂದಿನಿದೇವಿ ಕೆ , ಇಬ್ರಾಯಿಮ್ ಮೈಗೂರು, ವಿವೇಕಾನಂದ ವಿಶ್ವಜ್ಞ್, ಸುನೀಲ ಪತ್ರಿ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.