ಬೆಂಗಳೂರು: ಜನಸಂಖ್ಯಾ ಸ್ಫೋಟಕ್ಕೆ ಬ್ರೇಕ್ ಹಾಕುವ ಸಂಬಂಧ ಕರ್ನಾಟಕದಲ್ಲೂ ಹೊಸ ನೀತಿ ಜಾರಿಗೆ ತರಲು ಇದು ಸಕಾಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಕರ್ನಾಟಕದಲ್ಲೂ ಜಾರಿಗೆ ತರುವುದು ಒಲಿತು ಎಂದು ಪ್ರತಿಪಾದಿಸಿ ಸಿ.ಟಿ.ರವಿ ಮಾಡಿರುವ ಟ್ವೀಟ್ ಇದೀಗ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ ಜನಸಂಖ್ಯಾ ನಿಯಂತ್ರಣ ನೀತಿ ಕುರಿತಂತೆ ವ್ಯಾಪಕ ಚರ್ಚೆ ನಡೆದಿದ್ದು ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ಈ ನೀತಿಯನ್ನು ಕರ್ನಾಟಕದಲ್ಲೂ ಜಾರಿಗೆ ತರಲು ಇದು ಸೂಕ್ತ ಸಮಯ ಎಂದಿದ್ದಾರೆ. ಈ ಮೂಲಕ ಯೋಗಿ ನಿರ್ಧಾರಕ್ಕೆ ಹೈಕಮಾಂಡ್ ಬೆಂಬಲ ಇದೆ ಎಂಬ ಸಂಗತಿಯನ್ನು ಪರೋಕ್ಷವಾಗಿ ಅವರು ತಿಳಿಸಿದಂತಿದೆ.
It is high time Karnataka brings in a new population policy on the lines of Assam and Uttar Pradesh to control its growing population.
With the limited natural resources available, it will be difficult to meet the needs of every citizen if there is a population explosion.
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) July 13, 2021
ಅಷ್ಟೇ ಅಲ್ಲ, ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಮುಂದೆ ಜನಸಂಖ್ಯಾ ಸ್ಫೋಟ ಸಂದರ್ಭದಲ್ಲಿ ನಾಗರಿಕರ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.