ಚಾಮರಾಜನಗರ: ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹನೂರು ಮಹಿಳಾ ಕಾಂಗ್ರೆಸ್ ಘಟಕ್ಕೆ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಉಪಾಧ್ಯಕ್ಷರಿಗೆ ಮಾಜಿ ಶಾಸಕರಾದ ಆರ್ , ನರೇಂದ್ರ ಅವರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ನರೇಂದ್ರ, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಗೊಂಡ ಮಹಿಳಾ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಪದಾಧಿಕಾರಿಗಳಿಗೆ ಶುಭಕೋರಿದರು. ಕಳೆದ ಬಾರಿ ಕಾಂಗ್ರೆಸ್ ಸದಸ್ಯತ್ವ ಪಡೆಯುವುದರಲ್ಲಿ ನಮ್ಮ ಹನೂರು ವಿಧಾನಸಭಾ ಕ್ಷೇತ್ರ ಕರ್ನಾಟಕದಲ್ಲಿ ಎರಡನೇ ಸ್ಥಾನವನ್ನು ಪಡೆದಿತ್ತು, ಈ ಬಾರಿ ಎಲ್ಲಾ ಮಹಿಳೆಯರು ಒಟ್ಟುಗೂಡಿ ಗ್ರಾಮ ಪಂಚಾಯಿತಿ ಕಮಿಟಿ, ಬೂತ್ ಕಮಿಟಿ, ಕಾಂಗ್ರೆಸ್ ಕಮಿಟಿ ಹೀಗೆ ಕಮಿಟಿಗಳನ್ನು ಮಾಡಿಕೊಂಡು ಪಕ್ಷ ಸಂಘಟನೆಯನ್ನು ಮಾಡಬೇಕು, ಸಂಘಟನೆಯು ಮತ ಹಾಕುವುದಕ್ಕೆ ಮಾತ್ರ ಸೀಮಿತವಾಗಬಾರದು, ಮಹಿಳೆಯರ ದೌರ್ಜನ್ಯ, ಅನ್ಯಾಯ ವಿರುದ್ಧ ದ್ವನಿ ಎತ್ತಿ ನ್ಯಾಯಕೋಡಿಸುವಲ್ಲಿ ಹೋರಾಟ ಮಾಡಬೇಕು ಎಂದರು.
ಮಹಿಳಾ ಕಾಂಗ್ರೆಸ್ ನ ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಲತಾ ರಾಜೇಶ್ ಮಾತನಾಡಿಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಗೃಹಲಕ್ಷ್ಮಿ ,ಶಕ್ತಿ ಯೋಜನೆ ಗಳನ್ನು ನೀಡುವುದರಿಂದ ಸಣ್ಣ ಸಣ್ಣ ಉದ್ಯಮ ಮಾಡುವುದಕ್ಕೆ ಮಹಿಳೆಯರಿಗೆ ಅನುಕೂಲವಾಗಿದೆ, ಮಹಿಳೆಯರು ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಮುಂದುವರಿಯಬೇಕು ಆದ್ದರಿಂದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ರವರು ಮಹಿಳೆಯರಿಗೆ ಅವಕಾಶ ನೀಡಬೇಕೆಂದು ಮಹಿಳೆಯರನ್ನು ಒಟ್ಟುಗೂಡಿಸಿ ಸಂಘಟನೆಯನ್ನು ಮಾಡುತ್ತಿದ್ದಾರೆ ಈ ರೀತಿ ನಾವು ಸಹ ಅವರಿಗೆ ಬೆಂಬಲ ನೀಡಿ ಸಂಘಟನೆಯನ್ನು ಬಲಪಡಿಸಬೇಕು ಎಂದು ತಿಳಿಸಿದರು.
ಹನೂರು ಬ್ಲಾಕ್ ಅಧ್ಯಕ್ಷರಾದ ಸುವರ್ಣ ಮಾತನಾಡಿ ಮಹಿಳಾ ಕಾಂಗ್ರೆಸ್ ಸಂಘಟನೆಯ ಹನೂರು ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಎಲ್ಲಾ ಮಹಿಳೆಯರನ್ನು ಒಟ್ಟುಗೂಡಿಸಿ ಪಕ್ಷ ಸಂಘಟನೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್, ಕಾಂಗ್ರೆಸ್ ಮುಖಂಡರುಗಳಾದ ರಾಚಪ್ಪ, ನಾಗೇಂದ್ರ ,ರಾಜೇಶ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.