ಬೆಂಗಳೂರು: ಸದ್ಯವೇ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೋದಿ ಸಾರಥ್ಯದ ಬಿಜೆಪಿಗೆ ಈ ಸಮರದಲ್ಲಿ ಹಿನ್ನಡೆಯಾಗಲಿದೆಯೇ?
ಈ ಮಿನಿಮಹಾ ಸಮರಕ್ಕೆ ಪ್ರಧಾನಿ ಮೋದಿ, ಅಮಿತ್ ಷಾ ಸಹಿತ ಕೇಸರಿ ಪಡೆಯ ಘಟಾನುಘಟಿಗಳು ತಂತ್ರಗಾರಿಕೆ ನಡೆಸುತ್ತಿದ್ದಾರೆ. ಈ ಸಮರ ಬಗ್ಗೆ ರಾಜಕೀಯ ಪಂಡಿತರು ಬಗೆಬಗೆಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ, ಇತ್ತ ರಾಜಕೀಯ ಮುತ್ಸದ್ದಿಯೂ ಆದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ನದೇ ರೀತಿಯಲ್ಲಿ ಅವಲೋಕನ ಮಾಡಿ ಮುಂದೇನಾಗಬಹುದು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಅವರ ಈ ಅಭಿಪ್ರಾಯ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಸ್ತುತ ಪರಿಸ್ಥಿತಿ ಕುರಿತಂತೆ ಅಭಿಪ್ರಾಯಗಳನ್ನು ಹಂಚಿಕೊಂಡ ದೇವೇಗೌಡರು, ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ ಎಂದರು.
ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು. ಮತಗಳು ಕಡಿಮೆ ಬಂಂದರೂ ಈ ಬಾರಿ ಮಮತಾ ಮತ್ತೆ ಅಧಿಕಾರ ಪಡೆಯಬಹುದು ಎಂದು ಗೌಡರು ಹೇಳಿದರು.
ಇಡೀ ಬಿಜೆಪಿ ಟೀಮ್ ಪಶ್ಚಿಮ ಬಂಗಾಳದಲ್ಲಿ ನೆಲೆಯೂರಿದೆ. ಸಚಿವರು, ಶಾಸಕರು ಪಕ್ಷ ಬಿಟ್ಟಿರೋದು ಟಿಎಂಸಿಗೆ ಸ್ವಲ್ಪ ಹಿನ್ನೆಡೆಯಾಗಬಹುದು. ಆದರೆ ಮೂರನೇ ಬಾರಿಯೂ ಮಮತಾ ಬ್ಯಾನರ್ಜಿ ಸಿಎಂ ಆಗಲಿದ್ದಾರೆ ಎಂದು ಅವರು ವಿಶ್ಲೇಷಣೆ ಮಾಡಿದರು.