ಬೆಂಗಳೂರು: 2022ರಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪ್ರಮುಖ ಆರೋಪಿಯ ಬಂಧನವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್ ಅವರನ್ನು ಎನ್‌ಐಎ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜುಲೈ 26, 2022 ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಮೋಟಾರು ಸೈಕಲ್‌ಗಳಲ್ಲಿ ಇಬ್ಬರು ದುಷ್ಕರ್ಮಿಗಳು ನಡೆಸಿದ ದಾಳಿಗೆ ಪ್ರವೀಣ್ ನೆಟ್ಟಾರು ಬಲಿಯಾಗಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ನಂಟು ಹೊಂದಿದ್ದರೆನ್ನಲಾದ ದುಷ್ಕರ್ಮಿಗಳು ಈ ಕೊಲೆ ನಡೆಸಿದ್ದಾರೆಂದು ಪೊಲೀಸರು ಶಂಕಿಸಿದ್ದರು. .
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಚ್ಚಿನ ತನಿಖೆಗಾಗಿ ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಲಾಗಿತ್ತು. ಇದೀಗ ಮುಸ್ತಫಾ ಪೈಚಾರ್ ಕೂಡಾ ಬಂಧನಕ್ಕೊಳಗಾಗಿದ್ದು ಈ ಪ್ರಕರಣದ ತನಿಖೆಯಲ್ಲಿ ಎನ್‌ಐಎ ಯಶೋಗಾಥೆ ಬರೆದಿದೆ.


























































