ರಾಮನಗರ: ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬಿಜೆಪಿ ನಾಯಕರು ಕುರ್ಚಿಗೆ ಕಿತ್ತಾಡುವುದನ್ನು ಬಿಟ್ಟು ಕೊರೋನಾ ಮೂರನೇ ಅಲೆ ತಡೆಯುವತ್ತ ಗಮನ ಹರಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.