ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಕೇಂದ್ರ ಸಚಿವರನ್ನು ರಾಜ್ಯ ಬಿಜೆಪಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಪಕ್ಷದ ರಾಜ್ಯ ಎಸ್.ಸಿ. ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಕುಡಚಿ ಶಾಸಕ ಪಿ.ರಾಜೀವ್, ರಾಜ್ಯ ಮಾಧ್ಯಮ ವಿಭಾಗದ ಸಂಚಾಲಕ ಕರುಣಾಕರ ಖಾಸಲೆ ಹಾಗೂ ಪಕ್ಷದ ಪದಾಧಿಕಾರಿಗಳು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.